ಮೋದಿ ಸಭೆ ವೇಳೆ ಕಾರ್ಯಕರ್ತರಿಂದ ಕಲ್ಲು ತೂರಾಟ
ಗಯಾ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಭೆಗೂ ಮುನ್ನ ಬಿಜೆಪಿ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ ಸಂಭವಿಸಿದ್ದು, ಉದ್ರಿಕ್ತ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.
ಇಂದು ಗಯಾದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ಸಂಭವಿಸಿದೆ. ಇದರಿಂದ ಉದ್ರಿಕ್ತಗೊಂಡ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ವೇದಿಯತ್ತ ಚಪ್ಪಲಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಮೋದಿ ಸಮಾವೇಶಕ್ಕೆ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರು ಆಗಮಿಸಿದ್ದೆವೆ ಈ ಘರ್ಷಣೆ ಕಾರಣವಾಗಿದೆ. ಅಪಾರ ಪ್ರಮಾಣದಲ್ಲಿ ಸೇರಿದ್ದ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಬಿಜೆಪಿ ರ್ಯಾಲಿಗೂ ಮುನ್ನ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು.