ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿಮಾನ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ರಾಜ್ಯಪಾಲರು

Vishwanath S
Updated On : 27 Mar 2014, 3:19 am

ಚಂಡೀಗಢ್: ಹರಿಯಾಣ ರಾಜ್ಯಪಾಲ ಜಗನ್ನಾಥ್ ಪಹಾಡಿಯಾ ಅವರು ಪ್ರಯಾಣಿಸುತ್ತಿದ್ದ ವಿಮಾನ ಚಂಡೀಗಢ್ ವಿಮಾನ ನಿಲ್ದಾಣದಿಂದ ಟೆಕ್ ಆಫ್ ಆದ ಕೇಲವೆ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದು, ರಾಜ್ಯಪಾಲರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ.

ರನ್‌ವೇಯಿಂದ ಹಾರಿದ ವಿಮಾನ ಕೇವಲ 15 ರಿಂದ 20 ಅಡಿ ಮೇಲಕ್ಕೇರಿದ ಕೆಲ ನಿಮಿಷಗಳಲ್ಲೇ ನೆಲಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಭ್ರದತಾ ಸಿಬ್ಬಂದಿಗಳು ರಾಜ್ಯಪಾಲರನ್ನು ವಿಮಾನದಿಂದ ಹೊರಕ್ಕೆ ತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಜ್ಯಪಾಲರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಮಾನ ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement