ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆತ್ಮಹತ್ಯೆಗೆ ಶರಣಾದ ಕುಟುಂಬ: ನಾಲ್ವರು ಸಾವು

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನ ಹೊರವಲಯದಲ್ಲಿರುವ...

Mainashree
Updated On : 28 Mar 2014, 5:18 am

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನ ಹೊರವಲಯದಲ್ಲಿರುವ ತಲಘಟ್ಟಪುರದಲ್ಲಿ ನಡೆದಿದೆ.

ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಹೊರವಲಯದಲ್ಲಿರುವ ತಲಘಟ್ಟಪುರದ ವಕೀಲ್ ಗಾರ್ಡನ್‌ನಲ್ಲಿ ವಾಸವಾಗಿದ್ದ ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿ ಕೌಶಿಕ್ ಪುನೀತ್ ಶರ್ಮಾ(40) ಮತ್ತು ಶ್ರೀಲತಾ(35) ಆತ್ಮಹತ್ಯೆಗೆ ಶರಣಾದ ದಂಪತಿ.

ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ದಂಪತಿಗಳು, ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ದಂಪತಿ ಎರಡು ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement