ಕರ್ನಾಟಕದಲ್ಲಿ ಜೆಡಿಎಸ್ಗೆ ಅಸ್ತಿತ್ವವೇ ಇಲ್ಲ: ಸಿಎಂ
ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ...
ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿರುವ ಸಿದ್ದರಾಮಯ್ಯ, 2 ಅಥವಾ 3 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಸ್ತಿತ್ವ ಕಾಣಬಹುದು. ಜೆಡಿಎಸ್ನಲ್ಲಿ ಅಭ್ಯರ್ಥಿಗಳ ಕೊರತೆ ಎಂದಿದ್ದಾರೆ.
ಎತ್ತಿನಹೊಳೆ ಯೋಜನೆ ಬಗ್ಗೆ ಎಚ್.ಡಿ ಕುಮಾರಸ್ವಾಮಿ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ ಸಿದ್ದು, ಮೋದಿ ಪ್ರಧಾನಿಯಾದರೆ ದೇಶ ಹೊತ್ತಿ ಉರಿಯುತ್ತದೆ, ಮೋದಿ ಎಂದಿಗೂ ಪ್ರಧಾನಿಯಾಗಲ್ಲ ಎಂದು ಹೇಳಿದ್ದಾರೆ.
28 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು ಖಂಡಿತ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.