ಜಮ್ಮುವಿನಲ್ಲಿ ಎನ್ಕೌಂಟರ್: 4 ಸಾವು
ಮಿಲಿಟರಿ ಸಮವಸ್ತ್ರ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಖಾಸಗಿ ವಾಹನದ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಉಗ್ರರು, ಓರ್ವ ಯೋಧ ಸೇರಿದಂತೆ ಒಟ್ಟು ನಾಲ್ಕು ಮಂದಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ.
ಜಮ್ಮುವಿನ ಕತೌ ಸೇನಾ ಸಮವಸ್ತ್ರ ಧರಿಸಿದ್ದ ಉಗ್ರರ ದಂಡು ಖಾಸಗಿ ವಾಹನ ಮತ್ತು ಸೇನಾ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಇಬ್ಬರು ಉಗ್ರರು, ಓರ್ವ ಯೋಧ ಸೇರಿದಂತೆ ಒಟ್ಟು ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.