ರಾಹುಲ್, ಸೋನಿಯಾ ವಿರುದ್ಧ ಬಿಜೆಪಿಯ ಪ್ರಬಲ ವ್ಯಕ್ತಿ ಕಣಕ್ಕೆ: ರಾಜನಾಥ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಅತ್ಯಂತ ಪ್ರಬಲವಾದ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಉತ್ತರ ಪ್ರದೇಶದ ಅಮೇತಿ ಮತ್ತು ರಾಯ್ಬರ್ಲಿಯಲ್ಲಿ ಸೋನಿಯಾ ಮತ್ತು ರಾಹುಲ್ ವಿರುದ್ಧ ಪ್ರತಿಸ್ಪರ್ಧಿಯಾಗಿ ನಿಲ್ಲಿಸುವ ಅಭ್ಯರ್ಥಿಯ ಬಗ್ಗೆ ಬಿಜೆಪಿ ಪಕ್ಷದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮೋದಿ ಅವರ ಪ್ರಖ್ಯಾತಿಯ ಬಗ್ಗೆ ಕಾಂಗ್ರೆಸ್ನಲ್ಲಿ ಭಯ ಹುಟ್ಟಿಸಿದೆ. ಹಾಗಾಗಿ ಕಾಂಗ್ರೆಸ್ ನಾಯಕರು ಮೋದಿ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜನಾಥ್ ವ್ಯಂಗ್ಯವಾಡಿದ್ದಾರೆ.