ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸುಪ್ರೀಂನಿಂದ ಶ್ರೀನಿಗೆ ಗೇಟ್‌ಪಾಸ್, ಗವಾಸ್ಕರ್ ಬಿಸಿಸಿಐ ಹಂಗಾಮಿ ಅಧ್ಯಕ್ಷ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ..

Lingaraj Badiger
Updated On : 28 Mar 2014, 11:53 am

ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಗೇಟ್‌ಪಾಸ್ ನೀಡಿದ್ದು, ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರನ್ನು ಬಿಸಿಸಿಐ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಬಿಸಿಸಿಐ ಅಧ್ಯಕ್ಷ ಗಾದಿ ಬಿಡುವಂತೆ ಶ್ರಿನಿವಾಸನ್ ಅವರಿಗೆ ಕಳೆದ ಮಂಗಳವಾರ ಸೂಚಿಸಿತ್ತು. ಅಲ್ಲದೆ ನಿನ್ನೆ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್‌ರಂಥವರು ಬಿಸಿಸಿಐ ಅಧ್ಯಕ್ಷರಾಗಲಿ ಎಂಬ ಪ್ರಸ್ತಾಪವನ್ನು ಬಿಸಿಸಿಐ ಮುಂದೆ ಇಟ್ಟಿತ್ತು. ಈ ಕುರಿತು ಇಂದು ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ನೇತೃತ್ವದ ಸುಪ್ರೀಂ ಪೀಠ, ಐಪಿಎಲ್ ಪಂದ್ಯಾವಳಿ ಮುಗಿಯುವವರೆಗೆ ಗವಾಸ್ಕರ್ ಅವರು ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿ ಎಂದು ಹೇಳಿದ್ದಾರೆ.

ಐಪಿಎಲ್ ಪಂದ್ಯಾವಳಿ ಮುಗಿದ ನಂತರ ಅಧ್ಯಕ್ಷರ ಜವಾಬ್ದಾರಿಯನ್ನು ಬಿಸಿಸಿಐ ಉಪಾಧ್ಯಕ್ಷರಿಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಗವಾಸ್ಕರ್ ಅವರು ಐಪಿಎಲ್ ಪಂದ್ಯದ ವೇಳೆ ಕಾಮೆಂಟ್ರಿ ಹೇಳುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ.

ಈ ಮಧ್ಯೆ ಐಪಿಎಲ್ ಟೂರ್ನಿ ನಡೆಯುವ ಬಗ್ಗೆ ಉಂಟಾಗಿದ್ದ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ಐಪಿಎಲ್ ಪಂದ್ಯಾವಳಿ ನಿಲ್ಲಿಸುವ ಅಗತ್ಯ ಇಲ್ಲ ಎಂದು ಹೇಳಿದೆ. ಅಲ್ಲದೆ ಐಪಿಎಲ್ ಪಂದ್ಯವಾಡುವ ಬಗ್ಗೆ ಯಾವುದೇ ಆಟಗಾರರ ಮೇಲೆ ನಿರ್ಬಂಧ ಹೇರುವುದಿಲ್ಲ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement