ನಾಮಪತ್ರ ವಾಪಸ್ ಪಡೆಯುವುದಿಲ್ಲ : ಜಸ್ವಂತ್ ಸ್ಪಷ್ಟನೆ
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಾರ್ಮರ್ ಲೋಕಸಭಾ...
ಜೈಸಲ್ಮೇರ್: ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜಸ್ವಂತ್ ಸಿಂಗ್ ಅವರು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಕಣದಿಂದ ಹಿಂದೆ ಸರಿಯುಂತೆ ಮನವೊಲಿಸಲು ಬಿಜೆಪಿ ವರಿಷ್ಠರು ನಿರಂತರ ಸಂಪರ್ಕಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಜಸ್ವಂತ್ ಸಿಂಗ್, ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿಯಿಂದ ಯಾರು ನನ್ನನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಅಲ್ಲದೆ ಯಾವುದೇ ಕಾರಣಕ್ಕೂ ಬಾರ್ಮರ್ ಲೋಕಸಭಾ ಕ್ಷೇತ್ರ ಕಣದಿಂದ ಹಿಂದೆ ಸರಿಯುವುದಿಲ್ಲ. ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ಪ್ರತಿ ಬಾರಿ ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ಜಸ್ವಂತ್ ಸಿಂಗ್ ಅವರು ಈ ಬಾರಿ ಬಿಜೆಪಿ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಜಸ್ವಂತ್ ಸಿಂಗ್ ಬದಲಿಗೆ ಕಾಂಗ್ರೆಸ್ ಮಾಜಿ ನಾಯಕ ಸೋನಾರಾಂ ಚೌಧರಿಯವರಿಗೆ ಬಿಜೆಪಿ ಟಿಕೆಟ್ ನೀಡಿತ್ತು.
ನಾಮಪತ್ರ ಹಿಂಪಡೆದು ಪೈಪೋಟಿಯಿಂದ ಹಿಂದೆ ಸರಿಯುವಂತೆ ಜಸ್ವಂತ್ ಸಿಂಗ್ ಮನವೊಲಿಸಲು ಬಿಜೆಪಿಯು ಪ್ರಯತ್ನಿಸಿತ್ತು. ಏಪ್ರಿಲ್ 17 ರಂದು ಚುನಾವಣೆ ನಡೆಯಲಿರುವ ಈ ಕ್ಷೇತ್ರದಲ್ಲಿ ನಾಮಪತ್ರ ವಾಪಸಾತಿಗೆ ಇಂದು ಕಡೆಯ ದಿನವಾಗಿತ್ತು.