ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುರಿದು ಬಿದ್ದ ಟಿಡಿಪಿ-ಬಿಜೆಪಿ ಮೈತ್ರಿ, ತೆಲಂಗಾಣದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

ತೆಲಂಗಾಣ ಪ್ರದೇಶದಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ..

Vishwanath S
Updated On : 30 Mar 2014, 7:58 am

ಹೈದರಾಬಾದ್: ತೆಲಂಗಾಣ ಪ್ರದೇಶದಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಟಿಡಿಪಿ ಹಾಗೂ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ತಲೆದೋರಿದ್ದು, ತೆಲಂಗಾಣದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ನಿರ್ಧಾರಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶದಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿ ಮತ್ತು ಟಿಡಿಪಿ ಕನಸು ಆರಂಭದಲ್ಲೇ ಭಗ್ನವಾಗಿದೆ.

ಈ ಭಾಗದಲ್ಲಿ ಒಟ್ಟು 17 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅವುಗಳಲ್ಲಿ 11 ಸ್ಥಾನಗಳನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ಕೇಳಿತ್ತು. ಆದರೆ ಟಿಡಿಪಿ ಕೇವಲ 8 ಸ್ಥಾನಗಳನ್ನು ಮಾತ್ರ ನೀಡುವುದಾಗಿ ಹೇಳಿತ್ತು. ಇದರಿಂದಾಗಿ ತೆಲಂಗಾಣ ಸಂಸತ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದ್ದು, ಏಕಾಂಗಿಯಾಗಿ ಬಿಜೆಪಿ ಸ್ಪರ್ಧಿಸುತ್ತಿದೆ.

ಮೈತ್ರಿ ಮುರಿದು ಬಿದ್ದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡುವ ನಿರ್ಧಾರಕ್ಕೆ ಬಂದಿದೆ. ತೆಲಂಗಾಣ ಲೋಕಸಮರದಲ್ಲಿ ಕಾಂಗ್ರೆಸ್, ಬಿಜೆಪಿ, ಟಿಡಿಪಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಏರ್ಪಡಲಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement