ರಾಹುಲ್ vs ಸ್ಮೃತಿ, ಸೋನಿಯಾ vs ಉಮಾ ಭಾರತಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸೆಣಸಲು ಪ್ರಬಲ ಅಭ್ಯರ್ಥಿಗಾಗಿ ಹುಡುಕಾಡುತ್ತಿದ್ದ ಬಿಜೆಪಿಗೆ ಉತ್ತರ ದೊರೆತಂದಿದೆ.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸಲು ಬಿಜೆಪಿ ಹಿರಿಯ ಮುಖಂಡೆ ಉಮಾ ಭಾರತಿ ಮತ್ತು ಕಿರುತೆರೆ ನಟಿ ಸ್ಮೃತಿ ಇರಾನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ರಾಹುಲ್ ಗಾಂಧಿ ಅವರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ನಿರಾಕರಿಸಿದ್ದ ಬಿಜೆಪಿ ಮುಖಂಡೆ ಮತ್ತು ಕಿರುತೆರೆ ನಟಿ ಸ್ಮೃತಿ ಇರಾನಿ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ಮುಖಂಡರು ಯಶಸ್ವಿಯಾಗಿದ್ದು, ಶೀಘ್ರದಲ್ಲಿಯೇ ಸ್ಮೃತಿ ಇರಾನಿ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಅಂತೆಯೇ ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡೆ ಉಮಾಭಾರತಿ ಅವರು ಘೋಷಿಸಿದ್ದು ಶೀಘ್ರದಲ್ಲಿಯೇ ಈ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ರಾಹುಲ್ ಗಾಂಧಿ ಅವರನ್ನು ಶತಾಗತಾಯ ಮಣಿಸಲು ಬಿಜೆಪಿ ಹರಸಾಹಸ ಪಡುತ್ತಿದ್ದು, ಇದಕ್ಕಾಗಿ ಪ್ರಬಲ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿತ್ತು. ಸ್ಥಳೀಯ ಬಿಜೆಪಿ ಮುಖಂಡ ಸಲಹೆಯಂತೆ ಇದೀಗ ಕಿರುತೆರೆ ನಟಿ ಸ್ಮೃತಿ ಇರಾನಿ ಅವರನ್ನು ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಲು ಮನವೊಲಿಸಲಾಗಿದೆ. ಆ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಲು ಬಿಜೆಪಿ ಸಿದ್ಧವಾಗಿದೆ.