ಕಣದಿಂದ ಹಿಂದೆ ಸರಿದ 4 ಆಪ್ ಅಭ್ಯರ್ಥಿಗಳು
ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷಿದ್ ಹಾಗೂ ಸಚಿನ್ ಪೈಲಟ್‌ರಂತಹ ಪ್ರಭಾವಿ..
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷಿದ್ ಹಾಗೂ ಸಚಿನ್ ಪೈಲಟ್‌ರಂತಹ ಪ್ರಭಾವಿ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದಿದ್ದ ಆಪ್ ಅಭ್ಯರ್ಥಿಗಳು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ತಮ್ಮ ಈ ನಡೆಗೆ ಪಕ್ಷದಲ್ಲಿನ ಭ್ರಷ್ಟಾಚಾರ ಹಾಗೂ ಪಕ್ಷದ ಬೆಂಬಲದ ಕೊರತೆ ಕಾರಣ ಎಂದು ದೂರಿದ್ದಾರೆ.
ಉತ್ತರ ಪ್ರದೇಶದ ಫರುಖಾಬಾದ್, ಎತಹ್ ಮತ್ತು ಆಗ್ರ ಹಾಗೂ ರಾಜಸ್ತಾನದ ಅಜ್ಮೆರ್‌ನ ಆಪ್ ಅಭ್ಯರ್ಥಿಗಳು ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಎಎಪಿ ಟಿಕೆಟ್‌ಗಾಗಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಕೆಲವು ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿದ ನಂತರ ಈ ನಾಲ್ವರು ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ವಾಪಸ್ ತೆಗೆದುಕೊಂಡಿದ್ದಾರೆ.
ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ವಿರುದ್ಧ ಸ್ಪರ್ಧಿಸಿದ್ದ ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ಮುಕುಲ್ ತ್ರಿಪತಿ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಪಕ್ಷದಿಂದ ನನಗೆ ಯಾವುದೇ ರೀತಿಯಿಂದಲೂ ಬೆಂಬಲ ಸಿಗುತ್ತಿಲ್ಲ ಮತ್ತು ಪಕ್ಷದ ಒಳಗೇ ಭ್ರಷ್ಟಾಚಾರ ನಡೆಯುತ್ತಿದೆ. ಹೀಗಾಗಿ ತಾವು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.