ಪೆಟ್ರೋಲ್ ಬೆಲೆ: ಲೀಟರ್ಗೆ 75 ಪೈಸೆ ಇಳಿಕೆ
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದ ಹಿನ್ನೆಲೆಯಲ್ಲಿ ದೇಶೀಯ ತೈಲ ಕಂಪನಿಗಳು ಪೆಟ್ರೋಲ್ ಬೆಲೆಯನ್ನು...
ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದ ಹಿನ್ನೆಲೆಯಲ್ಲಿ ದೇಶೀಯ ತೈಲ ಕಂಪನಿಗಳು ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 75 ಪೈಸೆಯಷ್ಟು ಕಡಿತಗೊಳಿಸಿದ್ದು, ಪರಿಷ್ಕೃತ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ.
ಮಾಚ್ 1ರಂದು 60 ಪೈಸೆಗೆ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿತ್ತು. ಕಳೆದ 5 ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಇಳಿಸಲಾಗಿದೆ.
ಅಂತರರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 75 ಪೈಸೆಯಷ್ಟು ಕಡಿಮೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಗ್ರಾಹಕರಿಗೆ ಸ್ವಲ್ಪ ಸಮಾಧಾನ ತಂದಿದೆ. ಕಡಿತಗೊಂಡಿರುವ ಪೆಟ್ರೋಲ್ ದರ, ಸ್ಥಳೀಯ ಮಾರಾಟ ತೆರಿಗೆ ಅಥವಾ ಮೌಲ್ಯವರ್ಧಿತ ತೆರಿಗೆಯಿಂದ ಹೊರತಾಗಿದೆ ಎಂದು ತಿಳಿದು ಬಂದಿದೆ.