ಭುಲ್ಲರ್ ಗಲ್ಲು ರದ್ದು: ಸುಪ್ರೀಂನಿಂದ ಕೇಂದ್ರದ ಅರ್ಜಿ ವಜಾ
ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ.
ನವದೆಹಲಿ: ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ.
ದೆಹಲಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ನಿನ್ನೆ ಸುಪ್ರೀಂಕೋರ್ಟ್ ರದ್ದು ಪಡಿಸಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಇಂದು ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ.
1993ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಅಂತಿಮ ತೀರ್ಪು 2001ರಲ್ಲಿ ಪೂರ್ಣಗೊಂಡಿತ್ತು. ಅಲ್ಲದೆ ಪ್ರಕರಣದಲ್ಲಿ ದೇವಿಂದರ್ ಪಾಲ್ ಸಿಂಗ್ ಅಪರಾಧಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅಲ್ಲದೆ ಆತನಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2003ರಲ್ಲಿ ಭುಲ್ಲರ್ನ ಸಂಬಂಧಿಕರು ಗಲ್ಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ರಾಷ್ಟ್ರಪತಿಗಳ ಬಳಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಆದರೆ ರಾಷ್ಟ್ರಪತಿಗಳು ಭುಲ್ಲರ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.
ಭುಲರ್ ಮಾನಸಿಕ ಆರೋಗ್ಯ ಹದಗೆಟ್ಟಿರುವುದರಿಂದ ಆತನ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಭುಲ್ಲರ್ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದು, ಭುಲ್ಲರ್ ಗಲ್ಲು ಶಿಕ್ಷೆಗೆ ನ್ಯಾಯಾಲಯ ತಡೆ ನೀಡಿತ್ತು.