ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜೀವ್ ಹಂತಕರಿಗಿಲ್ಲ ಗಲ್ಲು: ತೀರ್ಪು ಎತ್ತಿಹಿಡಿದ ಸುಪ್ರೀಂ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆ ರದ್ದು ಪಡಿಸಿದ್ದ ತನ್ನದೇ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Srinivasa Murthy VN
Updated On : 1 Apr 2014, 4:16 am

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆ ರದ್ದು ಪಡಿಸಿದ್ದ ತನ್ನದೇ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿದ ಆದೇಶವನ್ನು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ಮೂವರು ಹಂತಕರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದ ತನ್ನದೇ ತೀರ್ಪನ್ನು ಎತ್ತಿಹಿಡಿದಿದೆ.

ಈ ಹಿಂದೆ ಗಲ್ಲು ಶಿಕ್ಷೆ ಜಾರಿಗೊಳಿಸುವಲ್ಲಿ ವಿಳಂಬ ಮಾಡಿದ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದ್ದ ಸುಪ್ರೀಂ ಕೋರ್ಟ್, ರಾಜೀವ್ ಗಾಂಧಿ ಹಂತಕರಾದ ಪೆರಾರಿವಲನ್, ಸಂತನ್ ಮತ್ತು ಮುರುಗನ್ ಸೇರಿದಂತೆ ಇತರೆ ಪ್ರಕರಣದ 15 ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಮಾರ್ಪಡಿಸಿತ್ತು. ಈ ನಡುವೆ ಇತ್ತ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಅತ್ತ ತಮಿಳುನಾಡು ಸರ್ಕಾರ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿ, ಇದಕ್ಕೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿತ್ತು.

ಸುಪ್ರೀಂ ಕೋರ್ಟ್ ಆದೇಶದಿಂದ ತೀವ್ರ ಮುಜುಗರಕ್ಕೀಡಾಗಿದ್ದ ಕೇಂದ್ರ ಸರ್ಕಾರ, ಕ್ಷಮಾಧಾನ ಅರ್ಜಿ ರಾಷ್ಟ್ರಪತಿಗಳ ಮುಂದಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವಂತಿಲ್ಲ. ಹೀಗಾಗಿ ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಬದಲಿಸಬಾರದು. ನ್ಯಾಯಾಲಯ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕು ಎಂದು ಅರ್ಜಿಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ತನ್ನ ಹಳೆಯ ತೀರ್ಪನ್ನೇ ಎತ್ತಿಹಿಡಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement