ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸ್ಸಾಂನಲ್ಲಿ ಶಂಕಿತ ಉಗ್ರರ ದಾಳಿ: 11 ಸಾವು

ಅಸ್ಸಾಂನ ಕೊಕ್ರಝಾರ್‌ನ ಗ್ರಾಮವೊಂದರಲ್ಲಿ ಶುಕ್ರವಾರ ಶಂಕಿತ...

Lingaraj Badiger
Updated On : 2 May 2014, 12:35 pm

ದಿಸ್ಪುರ್: ಅಸ್ಸಾಂನ ಕೊಕ್ರಝಾರ್‌ನ ಗ್ರಾಮವೊಂದರಲ್ಲಿ ಶುಕ್ರವಾರ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.

ಶಸ್ತ್ರ ಸಜ್ಜಿತ ಶಂಕಿತ ಉಗ್ರರ ಗುಂಪೊಂದು ಗೊರೇಶ್ವರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಲಪರಾಜನ್ ಗ್ರಾಮದ ಎರಡು ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 11 ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಐಜಿಪಿ ಎಲ್.ಆರ್.ಬಿಶ್ನೊಯಿ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಶ್ನೊಯಿ ಹೇಳಿದ್ದಾರೆ.

ದಾಳಿಯ ಹಿಂದೆ ಬೋಡೋ ಲ್ಯಾಂಡ್ ಸಂಘಟನೆಯ ಕೈವಾಡ ಇರುವ ಸಾಧ್ಯತೆ ಇದ್ದು, ಶಂಕಿತ ಉಗ್ರರ ಪತ್ತೆಗಾಗಿ ಸೇನೆ ಮತ್ತು ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement