ಕೆಎಸ್ಆರ್ಟಿಸಿ ದರ ಕೂಡ ಏರಿಕೆ
ಇನ್ನೆರಡು ದಿನದಲ್ಲಿ ಕೆಎಸ್ಆರ್ಟಿಸಿ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ಬೆಂಗಳೂರು: ನಾಳೆಯಿಂದಲೇ ಕೆಎಸ್ಆರ್ಟಿಸಿ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ಇಲಾಖೆಯ ಮೇಲೆ ಅಧಿಕವಾಗುತ್ತಿರುವ ಆರ್ಥಿಕ ಹೊರೆಯನ್ನು ನಿಭಾಯಿಸುವ ಸಲುವಾಗಿ ಸಾರಿಗೆ ದರವನ್ನು ಏರಿಕೆ ಮಾಡದೆ ಬೇರೆ ದಾರಿ ಇಲ್ಲ. ಹೀಗಾಗಿ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸಿಬ್ಬಂಧಿ ವೆಚ್ಚ ಮತ್ತು ಡೀಸೆಲ್ ದರ ಏರಿಕೆಯಿಂದಾಗಿ ಸಾರಿಗೆ ಸಂಸ್ಥೆಗಳ ಆರ್ಥಿಕ ಹೊರೆ ಹೆಚ್ಚುತ್ತಿದೆ. ಸಂಸ್ಥೆಯ ಮೇಲೆ 660 ಕೋಟಿ ರುಪಾಯಿ ಸಾಲವಿದ್ದು, ಪ್ರತಿ ವರ್ಷ 60 ಕೋಟಿ ಬಡ್ಡಿ ಕಟ್ಟಲಾಗುತ್ತಿದೆ. ಹೀಗಾಗಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಪ್ರಯಾಣದರ ಏರಿಕೆ ಅನಿವಾರ್ಯವೆಂದು ರಾಮಲಿಂಗಾರೆಡ್ಡಿ ಅವರು ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇತ್ತೀಚೆಗೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೆ ಸಾರ್ವಜನಿಕರ ಮೇಲೆ ಕೆಎಸ್ಆರ್ಟಿಸಿ ಪ್ರಯಾಣ ದರದ ಹೊರೆ ಬೀಳಲಿದೆ.