ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಚು.ಫಲಿತಾಂಶಕ್ಕೂ ಮುನ್ನ ನ್ಯಾಯಮೂರ್ತಿ ನೇಮಕ'

ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆಯ ಫಲಿತಾಂಶಕ್ಕೂ..

Srinivasa Murthy VN
Updated On : 2 May 2014, 4:28 am

ನವದೆಹಲಿ: ಯವತಿ ವಿರುದ್ಧ ಗೂಢಚಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

ನವದಹೆಲಿಯಲ್ಲಿ ಮಾತನಾಡಿದ ಸುಶೀಲ್ ಕುಮಾರ್ ಶಿಂಧೆ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿಯಾಗಿದ್ದುಕೊಂಡು ತಮ್ಮ ರಾಜ್ಯದ ಯುವತಿಯ ವಿರುದ್ಧವೇ ಅಕ್ರಮವಾಗಿ ಗೂಢಚಾರಿಕೆ ನಡೆಸಿದ ಇವರು ದೇಶದ ಮಹಿಳೆಯರಿಗೆ ಇನ್ನೆಂಥಹ ರಕ್ಷಣೆ ನೀಡಬಲ್ಲರು ಎಂದು ಶಿಂಧೆ ಪ್ರಶ್ನಿಸಿದರು. ಅಲ್ಲದೆ ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶದ ಮಹಿಳೆಯ ಸುರಕ್ಷತೆ ಬಗ್ಗೆ ತಮಗೆ ಭಯವಾಗುತ್ತಿದೆ ಎಂದು ಶಿಂಧೆ ಕಿಡಿಕಾರಿದರು.

ಈ ಹಿಂದೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿನ ನಿರ್ಧಾರದಂತೆ ಗೂಢಚಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗುತ್ತದೆ. ಅದು ಕೂಡ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೇ 16ಕ್ಕೂ ಮುನ್ನ ನೇಮಕ ಮಾಡಲಾಗುತ್ತದೆ ಎಂದು ಶಿಂಧೆ ತಿಳಿಸಿದರು.

ಇದಕ್ಕೂ ಮೊದಲು ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ಟೀಕೆಗಳ ಕುರಿತು ಮಾತನಾಡಿದ್ದ ಕೇಂದ್ರದ ಮತ್ತೋರ್ವ ಸಚಿವ ಕಪಿಲ್ ಸಬಿಲ್ ಅವರು, ಅಕ್ರಮ ಗೂಢಚಾರಿಕೆ ಪ್ರಕರಣ ಸಂಬಂಧ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದರು. ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಗೂಢಚಾರಿಕೆ ಪ್ರಕರಣದ ಆರೋಪ ರಾಜಕೀಯ ಪ್ರೇರಿತವಾಗಿದ್ದು, ದುರುದ್ದೇಶ ಪೂರ್ವಕವಾಗಿ ನರೇಂದ್ರ ಮೋದಿ ಅವರ ಮೇಲೆ ಆರೋಪ ಹೊರಿಸಲಾಗುತ್ತಿದೆ. ಹೀಗಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆವಿಗೂ ನ್ಯಾಯಮೂರ್ತಿಗಳನ್ನು ನೇಮಕ ಮಾಡಿಲ್ಲ ಎಂದು ಕಿಡಿಕಾರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement