ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ 10 ಸಾವು
ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದ್ದು, 10 ಸಾವಿಗೀಡಾಗಿದ್ದಾರೆ.
ಉಜ್ಜೈನಿ: ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದ್ದು, 10 ಸಾವಿಗೀಡಾಗಿದ್ದಾರೆ.
ಉಜ್ಜೈನಿಯ ಬದ್ನಾಗರ್ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಸಂಜೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಧಾರುಣವಾಗಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂಧಿಗಳು ದೌಡಾಯಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂಧಿ ಹರಸಾಹಸ ಪಡುತ್ತಿದ್ದಾರೆ. ಅವಘಡ ವೇಳೆ ಕಾರ್ಖಾನೆ 30ಕ್ಕೂ ಹೆಚ್ಚು ಸಿಬ್ಬಂದಿಗಳು ಇದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.