ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉಜ್ಜೈನಿ ಪಟಾಕಿ ಕಾರ್ಖಾನೆ ದುರಂತ: ಸಾವಿನ ಸಂಖ್ಯೆ 17ಕ್ಕೇರಿಕೆ

ಉಜ್ಜೈನಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ.

Srinivasa Murthy VN
Updated On : 4 May 2014, 3:32 am

ಉಜ್ಜೈನಿ: ಉಜ್ಜೈನಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ.

ನಿನ್ನೆ ಉಜ್ಜೈನಿಯ ಬದ್ನಾಗರ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣದಲ್ಲಿ ಇಂದು ಮತ್ತೆ 2 ಶವವಗಳು ದೊರೆತಿದ್ದು, ಸಾವಿನ ಸಂಖ್ಯೆ 17ಕ್ಕೇರಿದೆ. ರಾತ್ರಿಇಡೀ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಇಂದು ಕೂಡ ತಮ್ಮ ಕಾರ್ಯಾಚರಣೆ ಮುಂದುವರೆಸಿದರು. ಕಾರ್ಖಾನೆಯ ಅವಶೇಷಗಳಡಿಯಲ್ಲಿ ಇಂದು ಓರ್ವ ಮಹಿಳೆ ಸೇರಿದಂತೆ ಎರಡು ಮೃತದೇಹಗಳು ಪತ್ತೆಯಾಗಿವೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸರ್ಕಾರ, ಅವಘಡ ಕುರಿತು ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ ಕಾರ್ಖಾನೆಯ ಪರವಾನಗಿಯನ್ನು ಪರಿಶೀಲಿಸಲಾಗುತ್ತಿದೆ. ಅಂತೆಯೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳ ವಿವರವನ್ನು ಕೇಳಲಾಗಿದ್ದು, ಮೃತಪಟ್ಟಿವರಿಗೆ ಪರಿಹಾರ ಧನ ನೀಡಲಾಗುತ್ತದೆ ಎಂದು ಹೇಳಿದೆ. ಮೃತಪಟ್ಟವರಿಗೆ ತಲಾ 1.50 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರು ರುಪಾಯಿಗಳ ಪರಿಹಾರ ಘೋಷಿಸಿದೆ.

ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದರೂ, ಸಂಪೂರ್ಣ ತನಿಖೆಯಿಂದ ಸತ್ಯಾಂಶ ಹೊರಹಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯ ಮಾಲೀಕ ಮಹಮದ್ ಯೂಸುಫ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement