ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರ್ಯಾಲಿಯಲ್ಲಿ ದೇವರ ಫೋಟೋ ಬಳಕೆ; ಕಾಂಗ್ರೆಸ್ ದೂರು

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಸೋಮವಾರ ಫೈಜಾಬಾದ್‌ನಲ್ಲಿ ನಡೆದ..

Rashmi Kasaragodu
Updated On : 5 May 2014, 5:51 am

ಲಕ್ನೋ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಸೋಮವಾರ ಫೈಜಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಶ್ರೀರಾಮನ ಫೋಟೋ ಬಳಸಿರುವುದರ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ರಾಮ ಮಂದಿರ ನಿರ್ಮಾಣ ವಿಷಯವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಮೇಲೆ ಆರೋಪಿ ಹೊರಿಸಿರುವ ಕಾಂಗ್ರೆಸ್, ರ್ಯಾಲಿಯಲ್ಲಿ ದೇವರ ಫೋಟೋ ಬಳಸುವ ಮೂಲಕ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಿದೆ.

ಸೋಮವಾರ ಫೈಜಾಬಾದ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಶ್ರೀರಾಮ ದೇವರ ಹೆಸರು ಉಲ್ಲೇಖಿಸಿದ್ದು, ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಏತನ್ಮಧ್ಯೆ, 5 ವರ್ಷಗಳಲ್ಲಿ 10 ಕೋಟಿ ಉದ್ಯೋಗಾವಕಾಶಗಳನ್ನು ಕೊಡಿಸುತ್ತೇವೆ ಮತ್ತು 100 ದಿನಗಳಲ್ಲಿ ಹಣದುಬ್ಬರವನ್ನು ಕಡಿಮೆ ಮಾಡುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಯಾವುದೇ ಭರವಸೆಗಳನ್ನು ಪೂರೈಸಿಲ್ಲ.

ಆದರೆ ನಾನು ನೀಡಿರುವ ಎಲ್ಲ ಆಶ್ವಾಸನೆಗಳನ್ನು ಪೂರೈಸುವ ಮೂಲಕ ದೇಶದ ಜನರಿಗೆ ಒಳಿತಾಗುವಂತೆ ಮಾಡುತ್ತೇನೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement