ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭಾಷಾ ಮಾಧ್ಯಮ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಮಂಗಳವಾರ ಎತ್ತಿ ಹಿಡಿದಿದೆ.

Lingaraj Badiger
Updated On : 6 May 2014, 4:24 am

ನವದೆಹಲಿ: ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಮಂಗಳವಾರ ಎತ್ತಿ ಹಿಡಿದಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ

ಭಾಷಾ ಮಾಧ್ಯಮ ವಿವಾದ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಮಹತ್ವದ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ಹೇಳಿದೆ.

ತಂದೆ-ತಾಯಿ ಮಾತನಾಡುವ ಭಾಷೆಯೇ ಮಾತೃ ಭಾಷೆ, ಭಾಷೆಯನ್ನು ಹೇರುವ ಅಧಿಕಾರ ಸರ್ಕಾರಕ್ಕೆ ಇಲ್ಲ ಮತ್ತು ರಾಜ್ಯ ಸರ್ಕಾರ ಕನ್ನಡವನ್ನು ಕಡ್ಡಾಯ ಮಾಡಿದ್ದು, ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಕೋರ್ಟ್ ಹೇಳಿದೆ. ಅಲ್ಲದೆ ಭಾಷೆಯನ್ನು ನಿರ್ಧರಿಸುವ ಅಧಿಕಾರ ಮಗು ಮತ್ತು ಪೋಷಕರಿಗೆ ಇದೆ ಎಂದು ಸ್ಪಷ್ಟಪಡಿಸಿದೆ.

ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಬೇಕು ಎಂದು 1994, ಏಪ್ರಿಲ್ 29ರಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಸುತ್ತೋಲೆಯನ್ನು ಖಾಸಗಿ ಶಾಲೆಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಹೈಕೋರ್ಟ್‌ನ ಪೂರ್ಣ ಪೀಠ 2008ರ ಜು.2ರಂದು ತೀರ್ಪು ನೀಡಿ, ಭಾಷಾ ನೀತಿಯನ್ನು ರದ್ದುಗೊಳಿಸಿತ್ತು. ಅಲ್ಲದೆ ಭಾಷಾ ಮಾಧ್ಯಮ ನೀತಿಯನ್ನು ಖಾಸಗಿ ಶಾಲೆಗಳ ಮೇಲೆ ಹೇರಲು ಬರುವುದಿಲ್ಲ ಎಂದು ಹೇಳಿತ್ತು.

ಕರ್ನಾಟಕ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಭಾಷಾ ಮಾಧ್ಯಮ ವಿವಾದ ಅತ್ಯಂತ ಗಂಭೀರವಾದದ್ದು. ಹಲವು ಸಾಂವಿಧಾನಿಕ ಅಂಶಗಳನ್ನು ಈ ವಿವಾದ ಒಳಗೊಂಡಿದೆ. ಹೀಗಾಗಿ ಸಂವಿಧಾನ ಪೀಠವೇ ವಿಚಾರಣೆ ನಡೆಸಿ ತೀರ್ಪು ನೀಡಬೇಕು ಎಂದು 2013, ಜು.5ರಂದು  ನ್ಯಾಯಮೂರ್ತಿ ಪಿ.ಸದಾಶಿವಂ ಹಾಗೂ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿದ್ದ ವಿಭಾಗೀಯ ತೀರ್ಪು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement