ವಿಕ್ರಂ ಆಸ್ಪತ್ರೆಯಿಂದ ಅಂಬಿ ಡಿಸ್ಚಾರ್ಜ್
ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ವಸತಿ...
ಬೆಂಗಳೂರು: ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ವಸತಿ ಸಚಿವ ಹಾಗೂ ಹಿರಿಯ ನಟ ಅಂಬರೀಷ್ ಅವರು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶ್ವಾಸಕೋಶದ ಸೋಂಕಿನ ಹಿನ್ನಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಮಲೇಷ್ಯಾದಲ್ಲಿ ಸುದೀರ್ಘ ವಿಶ್ರಾಂತಿಯೊಂದಿಗೆ ರಾಜ್ಯಕ್ಕೆ ಆಗಮಿಸಿ, ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಅಂಬರೀಷ್ ಅವರು ತಪಾಸಣೆಗಾಗಿ ನಿನ್ನೆ ರಾತ್ರಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು.
ಅಂಬರೀಷ್ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆ ಆಗಿಲ್ಲ. ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಸಹ ಆಗಿಲ್ಲ ಎಂದು ತಪಾಸಣೆ ಬಳಿಕ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.