ಪ್ರಿಯಾಂಕಾ ಗಾಂಧಿ ವಿರುದ್ಧ ಕೇಸ್ ದಾಖಲು
ದರಭಂಗಾ (ಬಿಹಾರ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ, ನರೇಂದ್ರ ಮೋದಿ ಅವರು ನೀಚ ರಾಜಕಾರಣ ಮಾಡುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಬಿಹಾರದ ದರಭಂಗಾದ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿದೆ.
ನರೇಂದ್ರ ಮೋದಿ ವಿರುದ್ಧದ ಪ್ರಿಯಾಂಕ ಗಾಂಧಿ ಅವಹೇಳನಕಾರಿ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಅಲ್ಲದೆ ಬಿಜೆಪಿಯ ಮುಖಂಡ ಸೂರಜ್ ನಂದನ್ ಖುಷ್ವಾಹಾ ಈ ಪ್ರಕರಣ ದಾಖಲಿಸಿದ್ದಾರೆ.
ರಾಜೀವ್ ಗಾಂಧಿ ಕುರಿತು ಅಮೇಠಿಯಲ್ಲಿ ಮೋದಿ ಆಡಿದ್ದ ಮಾತುಗಳಿಗೆ ಸೋಮವಾರ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ, ‘ನನ್ನ ಹುತಾತ್ಮ ತಂದೆಯನ್ನು ಅವಮಾನಿಸಿರುವ ಮೋದಿ, ಕೆಳಮಟ್ಟದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದ್ದರು.