ಮೋದಿ ಕೀಳು ಮಟ್ಟದ ರಾಜಕಾರಣಿ: ಸೋನಿಯಾ
ಕುಷಿನಗರ(ಉತ್ತರಪ್ರದೇಶ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಆರೋಪಿಸಿದ್ದಾರೆ.
ಉತ್ತರಪ್ರದೇಶದ ಕುಷಿನಗರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೋನಿಯಾ, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗುಜರಾಜನ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮೋದಿ ಪ್ರಚಾರ ಮಾಡುತ್ತಿದ್ದಾರೆ. ಅವರು ಹೇಳುವಂತೆ ಗುಜರಾತ್ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮೋದಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಗುಜರಾತ್ ಸರ್ಕಾರ ಬಡವರನ್ನು ಅಣುಕಿಸುತ್ತಿದೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಗುಜರಾತ್ ಜನತೆಯನ್ನು ವಂಚಿಸುತ್ತಿದ್ದಾರೆ. ಇಂತಹ ಟೊಳ್ಳು ಭರವಸೆಗಳಿಗೆ ಜನರು ಮರುಳಾಗಬೇಡಿ. ತಮ್ಮ ಆಲೋಚನೆಗಳಿಂದ ಭಾರತದ ಸಂಯೋಜಿತ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಅಧಿಕಾರವಧಿಯಲ್ಲಿ ದೇಶದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅಲ್ಲದೆ ಜನತೆಗೆ ಪ್ರಯೋಜನಾವಾಗುವ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಶ್ಲಾಘಿಸಿದರು. ಕಾಂಗ್ರೆಸ್ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿವ ಬಿಜೆಪಿ, ಅವರ ಸರ್ಕಾರ ಅಧಿಕಾರವದಿಯಲ್ಲಿ ಭಯೋತ್ಪಾದನಾ ದಾಳಿಗಳು ನಡೆದಿಲ್ಲವ ಎಂದು ಪ್ರಶ್ನಿಸಿದರು. ದೇಶದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದರು.