ಬೇಹುಗಾರಿಕೆ ಪ್ರಕರಣದ ತನಿಖೆ ನಡೆಸಲ್ಲ: ಕೇಂದ್ರ
ಯುವತಿಯೊಬ್ಬಳ ವಿರುದ್ಧ ಬೇಹುಗಾರಿಕೆ ನಡೆಸಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತನಿಖಾ...
ನವದೆಹಲಿ: ಯುವತಿಯೊಬ್ಬಳ ವಿರುದ್ಧ ಬೇಹುಗಾರಿಕೆ ನಡೆಸಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ತನಿಖಾ ಪ್ರಕ್ರಿಯೆಗೆ ತಡೆ ಕೋರಿ ಬಾಧಿತ ಯುವತಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸಂವಿಧಾನ ಬದ್ಧ ಪ್ರಾಧಿಕಾರವನ್ನು ಅಕ್ರಮವಾಗಿ ಬಳಸಿಕೊಂಡು ಯುವತಿಯೊಬ್ಬಳ ವಿರುದ್ಧ ನರೇಂದ್ರ ಮೋದಿ ಸರ್ಕಾರದ ಬೇಹುಗಾರಿಕೆ ನಡೆಸಿದೆ ಆರೋಪ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಆವರದೇ(ಗುಜರಾತ್) ಸರ್ಕಾರ ನೇಮಿಸಿರುವ ಸಮಿತಿ ನಡೆಸುವ ತನಿಖೆಗೆ ತಡೆ ಹೇರುಲು ನಿರಾಕರಿಸುವ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವುದರಿಂದ ಈ ಸಂಬಂಧ ಗುಜರಾತ್ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಕೋರ್ಟ್ ಸೂಚಿಸಿದೆ.
ಗುಜರಾತ್ ಸರ್ಕಾರದಿಂದ ಅಕ್ರಮವಾಗಿ ಯುವತಿಯ ಬೇಹುಗಾರಿಕೆ ನಡೆದಿರುವ ಸಂಬಂಧ ವಿಶೇಷ ತನಿಖಾ ಆಯೋಗ ರಚಿಸುವ ಕುರಿತು ನಮಗೆ ಯಾವುದೇ ರೀತಿಯ ಪ್ರಸ್ತಾವನೆ ಬಂದಿಲ್ಲವೆಂದು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ ಬಳಿಕ ಸುಪ್ರೀಂಕೋರ್ಟ್ ಈ ನಿರ್ದೇಶನ ನೀಡಿದೆ.
ಅಕ್ರಮ ಬೇಹುಗಾರಿಕೆಯ ತನಿಖೆಗೆ ಸಿದ್ಧತೆ ನಡೆಯುತ್ತಿದ್ದಂತೆಯೇ ಪ್ರಕರಣದಲ್ಲಿ ಗುರುತಿಸಿಕೊಂಡಿದ್ದ ಯುವತಿಯ ತಂದೆ, ಇದು ನನ್ನ ಮಗಳ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆಯೆಂಬ ಕಾರಣವೊಡ್ಡಿ ತನಿಖೆಗೆ ತಡೆ ಹೇರುವಂತೆ ನಿನ್ನೆ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದರು.