ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿಗೆ ಬಿಎಸ್‌ಪಿ ಬೆಂಬಲ ನೀಡುವುದಿಲ್ಲ: ಮಾಯಾವತಿ

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಬಹುಜನ ಸಮಾಜವಾದಿ ಪಕ್ಷ ಎಂದಿಗೂ...

Vishwanath S
Updated On : 9 May 2014, 6:10 am

ಲಖನೌ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಬಹುಜನ ಸಮಾಜವಾದಿ ಪಕ್ಷ ಎಂದಿಗೂ ಬೆಂಬಲ ನೀಡುವುದಿಲ್ಲ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ.

ವಾರಣಾಸಿಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮಾಯಾವತಿ, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಪೂರ್ಣ ಬಹುಮತ ಸಿಗದೆ ಇದ್ದು, ಮೋದಿ ನಮ್ಮನ್ನು ಬೆಂಬಲಿಸುವಂತೆ ಕೇಳಿದರು ನಾವು ಎಂದಿಗೂ ಮೋದಿಗೆ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲು ಮೋದಿ ತಂತ್ರಗಳನ್ನು ಅನುಸರಿಸುತ್ತಿದ್ದು, ನರೇಂದ್ರ ಮೋದಿ ಮತದಾರರನ್ನು ದಾರಿ ತಪ್ಪಿಸುತ್ತಿದ್ದಾರೆ ಆದರೆ ಜನತೆ ಇದಕ್ಕೆ ಮರಳಾಗುವುದಿಲ್ಲ ಎಂದರು.

ಇತ್ತೀಚೆಗಷ್ಟೇ ನರೇಂದ್ರ ಮೋದಿ ಅವರು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಎನ್‌ಡಿಎಗೆ ಸಂಪೂರ್ಣ ಬಹುಮತ ಸಿಗದೆ ಇದ್ದರೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಮಮತಾ ಬ್ಯಾನರ್ಜಿ ಹಾಗೂ ಮಾಯಾವತಿ ಅವರನ್ನು ಬೆಂಬಲ ಕೋರುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಯಾವತಿ ಇತರ ಪಕ್ಷಗಳ ಬಗ್ಗೆ ನನಗೆ ಗೊತ್ತಿಲ್ಲ ಆದರೆ ಬಿಎಸ್‌ಪಿ ಮಾತ್ರ ಎಂದಿಗೂ ಮೋದಿಗೆ ಬೆಂಬಲ ನೀಡುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement