ಅಮಿತ್ ಶಾಗೆ ಸಮನ್ಸ್ ಜಾರಿ
ತುಳಸಿರಾಮ್ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮುಂಬೈ: ತುಳಸಿರಾಮ್ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಮಿತ್ ಶಾಗೆ ವಿಶೇಷ ಸಿಬಿಐ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಗುಜರಾತ್‌ನಿಂದ ಮುಂಬೈ ಕೋರ್ಟ್‌ಗೆ ವರ್ಗಾವಣೆಗೊಂಡಿರುವ ತುಳಸಿರಾಮ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನರೇಂದ್ರ ಮೋದಿ ಆಪ್ತ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾಗೆ ಸಮನ್ಸ್ ಜಾರಿ ಮಾಡಿದ್ದು, ಮೇ 23ರರೊಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ವಿಶೇಷ ನ್ಯಾಯಾಧೀಶರಾದ ಜೆ.ಟಿ ಉತಪತ್ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ತುಳಸಿರಾಮ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಅಮಿತ್ ಶಾ, ಪೊಲೀಸ್ ಅಧಿಕಾರಿಗಳು ಸೇರಿದಂತೆ 18 ಜನರ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಿತ್ತು.
ವಿಚಾರಣೆ ಕೈಗೆತ್ತಿಕೊಂಡ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
2005ರ ನವೆಂಬರ್‌ನಲ್ಲಿ ನಡೆದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ತುಳಸಿ ರಾಮ್ ಪ್ರಜಾಪತಿ ಕೂಡ ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಿದ್ದು, ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.