ತಾಯಿ, ಮಗ ನನ್ನ ವಿರುದ್ಧ ಕಿಡಿಕಾರುತ್ತಿದ್ದಾರೆ: ಮೋದಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಗ ರಾಹುಲ್ ಗಾಂಧಿ ನನ್ನ ವಿರುದ್ಧ ಕಿಡಿಕಾರುತ್ತಿದ್ದಾರೆ...
ಉತ್ತರಪ್ರದೇಶ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಗ ರಾಹುಲ್ ಗಾಂಧಿ ನನ್ನ ವಿರುದ್ಧ ಕಿಡಿಕಾರುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ನನ್ನ ವಿರುದ್ಧ ವಾಗ್ಧಾಳಿ ನಡೆಸುವುದೇ ಅವರಿಗೆ ರೂಢಿಯಾಗಿದೆ. ನನ್ನ ಹೆಸರು ಹೇಳಲು ಹಿಂಜರಿಯುತ್ತಾರೆ ಎಂದ ಮೋದಿ, ರೋಜ್ಗಾರ್ ಹೆಸರಲ್ಲಿ ಕಾಂಗ್ರೆಸ್ ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ರಾಬರ್ಟ್ಸ್ಗಂಜ್ನಲ್ಲಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶಕ್ಕೆ ಯುಪಿಎ ಸರ್ಕಾರ ಏನು ಮಾಡಿಲ್ಲ. ಬಡವರಿಗಾಗಿ ಸಮಾಜವಾದಿ ಪಕ್ಷ ನೇತೃತ್ವದ ಸರ್ಕಾರದ ಕೊಡುಗೆ ಶೂನ್ಯ ಎಂದು ಮೋದಿ ದೂರಿದ್ದಾರೆ.
ಜನರಿಗೆ ಏನು ಬೇಕೆಂಬುದನ್ನು ಜನರೇ ನಿರ್ಧರಿಸಲಿದ್ದಾರೆ. ಹಾಗಾಗಿ ಇದರ ಬಗ್ಗೆ ಇತರೆ ಪಕ್ಷಗಳು ಚಿಂತಿಸಬೇಕಿಲ್ಲ ಎಂದು ಮೋದಿ ಹೇಳಿದ್ದಾರೆ.