ವಾರಣಾಸಿಯಲ್ಲಿ ರಾಹುಲ್ ಭರ್ಜರಿ ರೋಡ್ ಶೋ
ಲೋಕಸಭಾ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣವಾಗಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಜಯ್ ರಾಯ್ ಪರ ಕಾಂಗ್ರೆಸ್ ...
ವಾರಣಾಸಿ: ಲೋಕಸಭಾ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣವಾಗಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಜಯ್ ರಾಯ್ ಪರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಭರ್ಜರಿ ರೋಡ್ ಶೋ ನಡೆಸಿದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಕ್ಷೇತ್ರವಾಗಿದ್ದು, ಈ ಭಾಗದಲ್ಲಿ ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ತಮ್ಮ ಬಲ ಪ್ರದರ್ಶ ಮಾಡಿದ್ದಾರೆ.
ಬೆಳಗ್ಗೆಯೆ ವಾರಣಾಸಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಗೋಲ್ ಜಡ್ಡಾ ಚೌರಾಹಾ ಪ್ರದೇಶದಿಂದ ಲಂಕಾ ಪ್ರದೇಶದವರೆಗೆ ರೋಡ್ ಶೋ ನಡೆಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ರಾಹುಲ್‌ಗೆ ಸಾಥ್ ನೀಡಿದ್ದಾರೆ. ರೋಡ್ ಶೋನಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್, ರಾಹುಲ್ ರೋಡ್ ಶೋನಲ್ಲಿ ಸ್ವಯಂ ಪ್ರೇರಿತರಾಗಿ ಸ್ಥಳೀಯ ಜನರು ಭಾಗವಹಿಸಿದ್ದು, ಯಾರನ್ನು ಗುಜರಾತ್, ಮಧ್ಯಪ್ರದೇಶ ಹಾಗೂ ದೆಹಲಿಯಿಂದ ಕರೆ ತಂದವರಲ್ಲ ಎಂದು ಲೇವಡಿ ಮಾಡಿದರು.
ವಾರಣಾಸಿಯಲ್ಲಿ ಮೋದಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭರ್ಜರಿ ರೋಡ್ ಶೋ ನಡೆಸುವುದರ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದ್ದರು. ಇದಕ್ಕೆ ಪ್ರತಿಯಾಗಿ ಇಂದು ಕಾಂಗ್ರೆಸ್ ಭರ್ಜರಿ ರೋಡ್ ಶೋ ನಡೆಸಿದೆ.