ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೆಹಲಿ ಗದ್ದುಗೆಯತ್ತ ಮೋದಿ

ಸತತ 10 ವರ್ಷಗಳ ಯುಪಿಎ ಸರ್ಕಾರ ಅಂತ್ಯವಾಗಲಿದ್ದು, ಕೇಂದ್ರದಲ್ಲಿ ಇನ್ನು ಮುಂದೆ ಕೇಸರಿ ಪರ್ವ ಆರಂಭಗೊಳ್ಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಳಿಸಿದೆ.

Srinivasa Murthy VN
Updated On : 12 May 2014, 9:17 am

ನವದೆಹಲಿ: ಸತತ 10 ವರ್ಷಗಳ ಯುಪಿಎ ಸರ್ಕಾರ ಅಂತ್ಯವಾಗಲಿದ್ದು, ಕೇಂದ್ರದಲ್ಲಿ ಇನ್ನು ಮುಂದೆ ಕೇಸರಿ ಪರ್ವ ಆರಂಭಗೊಳ್ಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಳಿಸಿದೆ.

ಖಾಸಗಿ ಚುನಾವಣಾ ಸಮೀಕ್ಷಾ ಸಂಸ್ಥೆಗಳು ದೇಶ್ಯಾದ್ಯಂತ ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆಯುವುದರೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಸಂಸತ್‌ನ ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೈತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಲಭಿಸಲಿದೆ. ಅಂತೆಯೇ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನ ಖಚಿತವಾಗಿದೆ.

ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಪೈಪೋಟಿ ನೀಡುತ್ತೇವೆ ಎಂದು ಹೇಳಿದ್ದ ತೃತೀಯರಂಗಕ್ಕೂ ಕೂಡ ಸಮೀಕ್ಷೆಯಲ್ಲಿ ತೀವ್ರ ಮುಖಭಂಗವಾಗಿದ್ದು, ಸಮೀಕ್ಷೆಯಲ್ಲಿ ತೃತೀರಂಗ ಕೂಡ ನಿರೀಕ್ಷಿತ ಸಾಧನೆ ಮಾಡುವುದರಲ್ಲಿ ವಿಫಲವಾಗಿದೆ.

ಇನ್ನು ಶೇಕಡಾವಾರು ಮತ ಹಂಚಿಕೆಯಲ್ಲಿಯೂ ಕೂಡ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಿದ್ದು, ಕಳೆದ 2009ರ ಲೋಕಸಭಾ ಚುನಾವಣೆಯಲ್ಲಿ ಶೇ.36ರಷ್ಟು ಮತಗಳನ್ನು ಪಡೆದಿದ್ದ ಕಾಂಗ್ರೆಸ್ ಈ ಬಾರಿ ಕೇವಲ ಶೇ.25ರಷ್ಟು ಮತಗಳನ್ನು ಮಾತ್ರ ಪಡೆದಿದೆ. ಕಳೆದ ಬಾರಿ ಶೇ.26ರಷ್ಟು ಮತಗಳನ್ನು ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಈ ಬಾರಿ ಶೇ.38ರಷ್ಟು ಮತಗಳನ್ನು ಗಳಿಸಿಕೊಂಡಿದೆ.

ಆದರೆ ಕೇಂದ್ರದಲ್ಲಿ ಆಗಿರುವಂತೆ ಕರ್ನಾಟಕದಲ್ಲಿ ಬಿಜೆಪಿಗೆ ಗಣನೀಯ ಲಾಭವೇನು ಆಗಿಲ್ಲ. ಇಲ್ಲಿ ಬಿಜೆಪಿ ಪಕ್ಷ ಸುಮಾರು 15ರಿಂದ 18 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಇನ್ನು ಕಾಂಗ್ರೆಸ್ ಪಕ್ಷಕ್ಕೂ ಕೂಡ ಹೆಚ್ಚು ಲಾಭವಾಗದಿದ್ದರೂ ಈ ಬಾರಿ 5 ರಿಂದ 7 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಇನ್ನು ಪ್ರಾದೇಶಿಕ ಪಕ್ಷವಾದ ಜೆಡಿಎಸ್ 1ರಿಂದ 3 ಸ್ಥಾನ ಪಡೆಯುವ ಸಾಧ್ಯತೆ ಇದೆ.

ವಿವಿಧ ಚುನಾವಣಾ ಸಮೀಕ್ಷಾ ಸಂಸ್ಥೆಗಳು ನಡೆಸಿರುವ ಸಮೀಕ್ಷಾ ವರದಿ ಹೀಗಿವೆ.

ರಾಷ್ಟ್ರೀಯ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement