ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೇನಾ ಮುಖ್ಯಸ್ಥರ ನೇಮಕಕ್ಕೆ ಚು.ಆಯೋಗದ ಒಪ್ಪಿಗೆ

ಭೂಸೇನಾ ಮುಖ್ಯಸ್ಥರ ನೇಮಕಕ್ಕೆ ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ನೀಡಿದೆ.

Srinivasa Murthy VN
Updated On : 12 May 2014, 6:00 am

ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಮುಕ್ತಾಯವಾಗಲಿರುವುದರಿಂದ ಭೂಸೇನಾ ಮುಖ್ಯಸ್ಥರ ನೇಮಕಕ್ಕೆ ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ನೀಡಿದೆ.

ಈ ಕುರಿತು ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿರುವ ಕೇಂದ್ರ ಚುನಾವಣಾ ಆಯೋಗ, ಸೇನಾ ಮುಖ್ಯಸ್ಥರನ್ನು ನೇಮಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಇದೇ ಜುಲೈ 31ರಂದು ಭೂಸೇನಾ ಮುಖ್ಯಸ್ಥರಾದ ಜ.ಬಿಕ್ರಮ್ ಸಿಂಗ್ ಅವರು ನಿವೃತ್ತರಾಗಲಿದ್ದಾರೆ. ಹೀಗಾಗಿ ಅವರ ಸ್ಥಾನ ತುಂಬಲು ರಕ್ಷಣಾ ಇಲಾಖೆ ಈ ಹಿಂದೆ ಲೆ.ಜ.ದಲ್ಬೀರ್ ಸಿಂಗ್ ಸುಹಾಗ್ ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು.

ಕೇಂದ್ರ ಚುನಾವಣಾ ಆಯೋಗಕ್ಕೂ ಕೂಡ ತನ್ನ ನಿರ್ಧಾರವನ್ನು ರಕ್ಷಣಾ ಇಲಾಖೆ ತಿಳಿಸಿತ್ತು. ಆದರೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತನ್ನ ನಿರ್ಧಾರವನ್ನು ಮುಂದಿನ ವಾರ ತಿಳಿಸುವುದಾಗಿ ಆಯೋಗ ತಿಳಿಸಿತ್ತು. ಅದರಂತೆ ಮತದಾನದ ಕೊನೆಯ ದಿನವಾದ ಇಂದು ಸಭೆ ಸೇರಿದ್ದ ಕೇಂದ್ರ ಚುನಾವಣಾ ಆಯೋಗ, ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಹೀಗಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಇಂದು ಸಂಜೆ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಸಂಪುಟದ ಹಿರಿಯ ಸಚಿವರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಸೇನಾ ಮುಖ್ಯಸ್ಥರ ನೇಮಕಕ್ಕೆ ಬಿಜೆಪಿ ವಿರೋಧ
ಈ ನಡುವೆ ಕೇಂದ್ರ ಸರ್ಕಾರ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಬಾರದು ಎಂದು ಬಿಜೆಪಿ ಹೇಳಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಅವರು, ಕೇಂದ್ರದ ಯುಪಿಎ ಸರ್ಕಾರದ ಅವಧಿ ಅಂತ್ಯವಾಗುತ್ತಿರುವ ಈ ಹಂತದಲ್ಲಿ ಸೇನಾ ಮುಖ್ಯಸ್ಥರನ್ನು ನೇಮಕ ಮಾಡುತ್ತಿರುವುದು ಎಷ್ಟು ಮಟ್ಟಿಗೆ ಸರಿ? ನಾನು ಈ ಬಗ್ಗೆ ಯಾವುದೇ ಟೀಕೆ ಮಾಡುವುದಿಲ್ಲ. ಆದರೆ ಇಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಡಾ.ಸಿಂಗ್ ಸರ್ಕಾರಕ್ಕೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement