ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅನೈತಿಕ ಸಂಬಂಧ: ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಅನೈತಿಕ ಸಂಬಂಧ ಹೊಂದಿದ ಆರೋಪದ ಮೇಲೆ ಸಂಸದ ಹಾಗೂ ದಕ್ಷಿಣ ಕನ್ನಡ ಬಿಜೆಪಿ...

Lingaraj Badiger
Updated On : 13 May 2014, 3:16 am

ಮಂಗಳೂರು: ಅನೈತಿಕ ಸಂಬಂಧ ಹೊಂದಿದ ಆರೋಪದ ಮೇಲೆ ಸಂಸದ ಹಾಗೂ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧ ಮಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಸತೀಶ್ ಶೆಟ್ಟಿ ಎಂಬುವರು ನೀಡಿದ್ದ ದೂರಿನ ಅನ್ವಯ ಬಂದರು ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಕಳೆದ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಿದ್ದ ಸಂದರ್ಭದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ಪತ್ನಿ ಮೇಲೆ ಕಟೀಲ್ ಕಣ್ಣು ಬಿದ್ದಿತ್ತು. ನಂತರ ನನ್ನ ಹಾಗೂ ಪತ್ನಿ ನಡುವೆ ವೈಮನಸ್ಯ ಬಂದಿತ್ತು. ಕಟೀಲ್ ಈ ಸಂದರ್ಭವನ್ನೇ ಬಳಿಸಿಕೊಂಡು ನನ್ನ ಪತ್ನಿಯನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ ಎಂದು ಮುಂಬೈ ನಿವಾಸಿಯಾಗಿರುವ ಉದ್ಯಮಿ ಸತೀಶ್ ಶೆಟ್ಟಿ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಪ್ರಕರಣ ಬೆಳಕಿಗೆ ಬಂದ ನಂತರ ನಳೀನ್ ಕುಮಾರ್ ಕಟೀಲ್ ಅವರ ಬೆಂಬಲಿಗರು ತಮಗೆ ಜೀವ ಬೇದರಿಕೆ ಹಾಕಿದ್ದಾರೆ ಎಂದು ಸತೀಶ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕಟೀಲ್, ಸತೀಶ್ ಶೆಟ್ಟಿ ಯಾರೆಂಬುದು ನನಗೆ ಗೊತ್ತಿಲ್ಲ ಮತ್ತು ತಾವು ಯಾರಿಗೂ ಜೀವ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಇದು ಕಟೀಲ್ ಅವರನ್ನು ರಾಜಕೀಯವಾಗಿ ಮುಗಿಸುವ ತಂತ್ರ. ಆರು ವರ್ಷಗಳ ಹಿಂದೆ ನಡೆದ ಪ್ರಕರಣವನ್ನು ಈಗ ಬಹಿರಂಗ ಪಡಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಘಟನೆ ಸಂಬಂಧ ಕಟೀಲ್ ಅವರು ತಮಗೆ ಮಾಹಿತಿ ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement