ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇದಾರನಿಗೆ ಮತ್ತೆ ಮಳೆ ಕಾಟ, ಮೇ 16ರವರೆಗೆ ಯಾತ್ರೆ ಸ್ಥಗಿತ

ಉತ್ತರಾಖಂಡ ರಾಜ್ಯದಲ್ಲಿ ಬೀಳುತ್ತಿರುವ ಸತತ ಮಳೆಯ ಹಿನ್ನಲೆಯಲ್ಲಿ ಕೆದಾರನಾಥ ಮತ್ತು ಬದರಿನಾಥ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Srinivasa Murthy VN
Updated On : 13 May 2014, 5:34 am

ಡೆಹ್ರಾಡೂನ್: ಉತ್ತರಾಖಂಡ ರಾಜ್ಯದಲ್ಲಿ ಬೀಳುತ್ತಿರುವ ಸತತ ಮಳೆಯ ಹಿನ್ನಲೆಯಲ್ಲಿ ಕೆದಾರನಾಥ ಮತ್ತು ಬದರಿನಾಥ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಿಮಾಲಯದ ತಪ್ಪಲಿನಲ್ಲಿರುವ ಪವಿತ್ರ ಯಾತ್ರಾ ಸ್ಥಳಗಳಾದ ಕೇದಾರನಾಥ ಮತ್ತು ಬದರಿನಾಥ ಯಾತ್ರೆಗಳಿಗೆ ಮತ್ತೆ ತಡೆಯುಂಟಾಗಿದ್ದು, ಸತತ ಮಳೆ ಮತ್ತು ಹಿಮಪಾತದಿಂದಾಗಿ ಯಾತ್ರೆಯನ್ನು ಮೇ 16ರವರೆಗೂ ಸ್ಥಗಿತಗೊಳಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕೇದಾರನಾಥ ಮತ್ತು ಬದರಿನಾಥದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಯಾತ್ರೆಗೆ ತೀವ್ರ ತೊಂದರೆಯಾಗುತ್ತಿದ್ದು, ಹಲವು ಯಾತ್ರಿಗಳು ಮಳೆಯಲ್ಲಿ ಸಿಲುಕಿದ್ದಾರೆ.

ಹೀಗಾಗಿ ಉತ್ತರಾಖಂಡ ಸರ್ಕಾರ ಯಾತ್ರಾರ್ಥಿಗಳ ನೆರವಿಗೆ ಧಾವಿಸಿದ್ದು, ಕೇದಾರನಾಥ ಮತ್ತು ಬದರಿನಾಥ ಕ್ಷೇತ್ರಗಳಲ್ಲಿ ಶಿಬಿರಗಳನ್ನು ತೆರೆದಿದೆ. ಅಧಿಕಾರಿಗಳ ಪ್ರಕಾರ ಈಗಾಗಲೇ ಸುಮಾರು 150ಕ್ಕೂ ಅಧಿಕ ಯಾತ್ರಿಗಳು ಯಶಸ್ವಿಯಾಗಿ ಕೇದಾರನಾಥ ಯಾತ್ರೆ ಮುಗಿಸಿದ್ದು, ಅವರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸಿಕೊಡಲಾಗಿದೆ. ಅಲ್ಲದೆ ಮಳೆಯಲ್ಲಿ ಸಿಲುಕಿದ್ದ ಯಾತ್ರಿಗಳನ್ನು ಕೇದಾರನಾಥ ದೇವಾಲಯದಿಂದ 5 ಕಿ.ಮೀ ದೂರದಲ್ಲಿರುವ ಲಿಂಚೌಲಿ ಗ್ರಾಮದಲ್ಲಿ ತೆರೆಯಲಾಗಿರುವ ಶಿಬಿರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಪವಿತ್ರ ಯಾತ್ರಾ ಸ್ಥಳಗಳಾದ ಕೇದಾರನಾಥ, ಬದರಿನಾಥ ಮತ್ತು ಯಮುನೋತ್ರಿ ಕ್ಷೇತ್ರಗಳಲ್ಲಿ ಕಳೆದ ವರ್ಷ ಜುಲೈ ತಿಂಗಳಲ್ಲಿ ವಿನಾಶಕಾರಿ ಪ್ರವಾಹ ಸಂಭವಿಸಿತ್ತು. ಘಟನೆಯಲ್ಲಿ ಸಾವಿರಾರು ಯಾತ್ರಾರ್ಥಿಗಳು ಸಾವನ್ನಪ್ಪಿ, ಹಲವರು ಜಲಸಮಾಧಿಯಾಗಿದ್ದರು. ಈ ಘಟನೆ ಮತ್ತೆ ಮರುಕಳಿಸಬಾರದು ಎಂಬ ಹಿನ್ನಲೆಯಲ್ಲಿ ಈ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement