ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಫಲಿತಾಂಶಕ್ಕೂ ಮೊದಲೇ ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಲಾಬಿ

ಈ ಚುನಾವಣೆಯಲ್ಲಿ ಒಟ್ಟಾರೆ ಎನ್‌ಡಿಎ ಅತಿ ದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಲಿದೆ ಎಂಬುದು ಸುದ್ದಿವಾಹಿನಿಗಳು ನಡೆಸಿದ....

Lingaraj Badiger
Updated On : 13 May 2014, 12:08 pm

ನವದೆಹಲಿ: ಈ ಚುನಾವಣೆಯಲ್ಲಿ ಒಟ್ಟಾರೆ ಎನ್‌ಡಿಎ ಅತಿ ದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಲಿದೆ ಎಂಬುದು ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳಿಂದ ಬಹಿರಂಗವಾಗಿದ್ದು, ಇದರ ಬೆನ್ನಲ್ಲೇ ದೆಹಲಿಯಲ್ಲಿ ಹೊಸ ಸರ್ಕಾರದ ಸಂಭಾವ್ಯ ಸಚಿವರ ಲೆಕ್ಕಾಚಾರ ಶುರುವಾಗಿದೆ. ಅಲ್ಲದೆ ಫಲಿತಾಂಶಕ್ಕೂ ಮೊದಲೇ ಬಿಜೆಪಿಯಲ್ಲಿ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.

ಮೇ 16ರ ಬಳಿಕ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಖಾತೆ, ನಿತಿನ್ ಗಡ್ಕರಿ ಅವರಿಗೆ ನಗರಾಭಿವೃದ್ಧಿ ಖಾತೆ, ಮನೋಹರ್ ಪಾರಿಕರ್‌ಗೆ ಗೃಹ ಖಾತೆ, ಅರುಣ್ ಜೇಟ್ಲಿಗೆ ಹಣಕಾಸು ಖಾತೆ, ಸುಶೀಲ್ ಮೋದಿಗೆ ಕೃಷಿ ಹಾಗೂ ರವಿಶಂಕರ್ ಪ್ರಸಾದ್ ಅವರಿಗೆ ಕಾನೂನು ಖಾತೆ ಸಿಗುವ ಸಾಧ್ಯತೆ ಇದೆ.

ಮೋದಿ ಸಂಪುಟದಲ್ಲಿ ರಾಜ್ಯದಿಂದ ನಾಲ್ವರಿಗೆ ಸ್ಥಾನ?
ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಹಾಗೂ ಅನಂತಕುಮಾರ್ ಮತ್ತು ರಮೇಶ್ ಜಿಗಜಿಣಗಿ ರೇಸ್‌ನಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement