ಬಾಗ್ಧಾದ್ನಲ್ಲಿ ಬಾಂಬ್ ಸ್ಫೋಟ: 19 ಸಾವು
ಬಾಗ್ಧಾದ್: ಪ್ರತ್ಯೇಕ ಸ್ಥಳಗಳಲ್ಲಿ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ 19 ಜನರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಶೀಯಾ ಮುಸ್ಲೀಂ ಜನಾಂಗವನ್ನು ಗುರಿಯಾಗಿಸಿಟ್ಟುಕೊಂಡು ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದ ಶಿಯಾ ಮುಸ್ಲೀಂ ಜನಾಂಗದ ಮೇಲೆ ಕಾರ್ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದು, 7 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಾಗ್ಧಾದ್ನ ಸಾದರ್ ಸಿಟಿಯಲ್ಲಿ ಮತ್ತೊಂದು ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.