ಪಿರಿಯಾಪಟ್ಟಣ ಬಳಿ ಭೀಕರ ರಸ್ತೆ ಅಪಘಾತ: 9 ಸಾವು
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಮ್ಲಾಪುರ ಬಳಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,..
ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಮ್ಲಾಪುರ ಬಳಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು 11 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗಿನ ಜಾವ ತಮಿಳುನಾಡಿನಿಂದ ಮಂಗಳೂರಿಗೆ ಬರುತ್ತಿದ್ದ ಟೆಂಪೋ ಟ್ರಾವೆಲರ್ ಮತ್ತು ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಟೆಂಪೋ ಟ್ರಾವೆಲರ್ನಲ್ಲಿ ಒಟ್ಟು 20 ಮಂದಿ ಪ್ರಯಾಣಿಸುತ್ತಿದ್ದರು ಮತ್ತು ಇವರೆಲ್ಲ ಮಂಗಳೂರು ಮೂಲದವರಾಗಿದ್ದು, ತಮಿಳುನಾಡು ಪ್ರವಾಸ ಮುಗಿಸಿಕೊಂಡು ವಾಪಸ್ ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪಿರಿಯಾಪಟ್ಟಣ ಪೊಲೀಸರು ತಿಳಿಸಿದ್ದಾರೆ.