ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಿರೇಮಠ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ..

Lingaraj Badiger
Updated On : 14 May 2014, 1:35 am

ಧಾರವಾಡ: ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಬುಧವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಎಸ್.ಆರ್.ಹಿರೇಮಠ ಅವರು ಪ್ರಕಟಿಸಿದ್ದ ಭ್ರಷ್ಟ ರಾಜಕಾರಣಿಗಳ ಪಟ್ಟಿಯಲ್ಲಿ ಜೋಶಿ ಅವರ ಹೆಸರಿತ್ತು. ಈ ಹಿನ್ನೆಲೆಯಲ್ಲಿ ಜೋಶಿ ಅವರು ಹಿರೇಮಠ ವಿರುದ್ಧ ಇಂದು ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಕೇಸ್ ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ನಾನು ಸಾರ್ವಜನಿಕ ಜೀವನದಲ್ಲಿ ಸ್ವಚ್ಛ ಮತ್ತು ನಿಷ್ಕಳಂಕವಾಗಿದ್ದೇನೆ. ನನ್ನನ್ನು ಯಾವುದೇ ಪದದಿಂದ ನಿಂದಿಸಿದರೂ ಸಹಿಸಿಕೊಳ್ಳುತ್ತೇನೆ. ಆದರೆ ಭ್ರಷ್ಟಾಚಾರಿ ಎಂದರೇ ಮಾತ್ರ ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಹಿರೇಮಠ, ಕೇಸ್ ಬಗ್ಗೆ ನನಗೆ ಇನ್ನು ಯಾವುದೇ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ತಿಳಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement