ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 2 ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಬೆಂಗಳೂರಿನ ಹೆಣ್ಣೂರು ಬಳಿಯ ಭೈರತಿ ಗ್ರಾಮದಲ್ಲಿ ನಡೆದಿದೆ.
ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರನ್ನು ಗುಲ್ಬರ್ಗಾ ಮೂಲದ ಚೆನ್ನಯ್ಯ ಹಾಗೂ ಶರಣಪ್ಪ ಎಂದು ಗುರುತಿಸಲಾಗಿದೆ. ಅಲ್ಲದೆ ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳು ಹುಸೇನ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.