ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಲೈಸ್ವಾಮಿಯನ್ನು ಉಚ್ಛಾಟಿಸಿದ ಜಯಾ

ಮೈತ್ರಿಮಾಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಮಲೈಸ್ವಾಮಿ ಅವರನ್ನು..

Mainashree
Updated On : 15 May 2014, 5:03 am

ಚೆನ್ನೈ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಎಐಎಡಿಎಂಕೆ ನಾಯಕಿ ಜಯಲಲಿತಾ ಮೈತ್ರಿಮಾಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಮಲೈಸ್ವಾಮಿ ಅವರನ್ನು ಜಯಲಲಿತಾ ಅವರು ಪಕ್ಷದಿಂದ ಉಚ್ಛಾಟಿಸಿದ್ದಾರೆ.

ನಿನ್ನೆಯಷ್ಟೆ ಮಲೈಸ್ವಾಮಿ ಅವರು ಜಯಲಲಿತಾ ಮತ್ತು ಮೋದಿ ಆತ್ಮೀಯ ಸ್ನೇಹಿತರು. ರಾಜಕೀಯವಾಗಿ ವಿಭಿನ್ನ ಸಿದ್ಧಾಂತಗಳನ್ನು ಹೊಂದಿದ್ದರೂ, ಅವರು ಒಳ್ಳೆಯ ಸ್ನೇಹಿತರಾಗಿದ್ದಾರೆ. ಹಾಗಾಗಿ, ಫಲಿತಾಂಶದ ಬಳಿಕ ಮೋದಿ ಪ್ರಧಾನಿಯಾದರೆ, ಜಯಲಲಿತಾ ಅವರು ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಳ್ಳಲಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಗೆ ಹೇಳಿದ್ದರು.

ಈ ರೀತಿ ಹೇಳಿಕೆ ನೀಡುವ ಮೂಲಕ ಎಐಎಡಿಎಂಕೆ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಮಲೈಸ್ವಾಮಿ ಅವರನ್ನು ಇಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ನಾಳೆ ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಎಐಎಡಿಎಂಕೆ ಪಕ್ಷ ತಮಿಳುನಾಡಿನಲ್ಲಿ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement