ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೂತನ ಸೋಲಾರ್ ನೀತಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಸಂಪುಟ ಗುರುವಾರ ಅನುಮತಿ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ರೈತರ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಸಂಪುಟ ಸಮ್ಮತಿ ಸೂಚಿಸಿದ್ದು, ಇದರಿಂದ ವರ್ಷಕ್ಕೆ 450 ಮೆ.ವ್ಯಾಟ್ ವಿದ್ಯುತ್ ಉತ್ಪದನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಅಲ್ಲದೆ ಸೋಲಾರ್ ವಿದ್ಯುತ್ ಉತ್ಪಾದನೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.
ಬಿಸಿಲು ಹೆಚ್ಚಿರುವ ಹೈದರಾಬಾದ್ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಸಾಧ್ಯತೆ ಇದೆ.
ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ, ಜೂನ್ 10ರೊಳಗೆ ವರ್ಗಾವಣೆ ಮುಕ್ತಾಯಕ್ಕೆ ಸೂಚನೆ
ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು
2-3 ವರ್ಷದಿಂದ ಬಾಕಿ ಇರುವ ಕಡತಗಳ ವಿಲೇವಾರಿಗೆ ಇಲಾಖೆಗಳಿಗೆ ಸೂಚನೆ
3,628 ಪಿಡಿಓಗಳಿಗೆ ಲ್ಯಾಪ್‌ಟಾಪ್ ನೀಡಲು ತೀರ್ಮಾನ
ವಿದ್ಯಾರ್ಥಿಗಳಿಗೆ ನೀಡಬೇಕಿದ್ದ 2.16ಕೋಟಿ ಬಾಕಿ ಶುಲ್ಕ ವಾಪಸ್ ನೀಡಲು ನಿರ್ಧಾರ
ಕರ್ನಾಟಕ ಪಂಜಾಯತ್ ರಾಜ್ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ
1000ಕ್ಕೂ ಹೆಚ್ಚು ಶುದ್ಧ ನೀರಿನ ಘಟಕ ಸ್ಥಾಪನೆ, ಪ್ರತಿ ಲೀಟರ್‌ಗೆ 5ರಿಂದ 10 ಪೈಸೆ ದರ ನಿಗದಿ