ವಾರಣಸಿಯಲ್ಲಿ ಮೋದಿ ಮುನ್ನಡೆ, ಅಮೇಠಿಯಲ್ಲಿ ರಾಹುಲ್‌ಗೆ ಹಿನ್ನಡೆ
ಭಾರಿ ಕುತೂಹಲ ಹುಟ್ಟಿಸಿರುವ ವಾರಣಸಿಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮುನ್ನಡೆ ಸಾಧಿಸುತ್ತಿದ್ದು,..
ನವದೆಹಲಿ: ಭಾರಿ ಕುತೂಹಲ ಹುಟ್ಟಿಸಿರುವ ವಾರಣಸಿಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮುನ್ನಡೆ ಸಾಧಿಸುತ್ತಿದ್ದು, ಜಿದ್ದಾಜಿದ್ದಿಗೆ ಕಾರಣವಾಗಿರುವ ಅಮೇಠಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಇನ್ನು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವಿದಿಶಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಷ್ಮಾ ಸ್ವರಾಜ್, ಅಮೃತ್‌ಸರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಜೇಟ್ಲಿ ಮುನ್ನಡೆ, ನಾಂದೇಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಚವ್ಹಾಣ್ ಹಾಗೂ ಮೀರತ್ ಕೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ನಟಿ ನಗ್ಮಾ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಭಾರಿ ಮುನ್ನಡೆ
ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಎಐಎಡಿಎಂಕೆ 39 ಕ್ಷೇತ್ರಗಳ ಪೈಕಿ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಪ್ರತಿಪಕ್ಷ ಡಿಎಂಕೆ ಕೇವಲ 5 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.