ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೋಲಿಗೆ ಸೋನಿಯಾ, ರಾಹುಲ್ ರಾಜಿನಾಮೆ ಪರಿಹಾರವಲ್ಲ: ಸಿಎಂ

Lingaraj Badiger
Updated On : 17 May 2014, 3:42 am

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜಿನಾಮೆ ಕೊಡುವ ಅಗತ್ಯ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋಲಿಗೆ ರಾಜಿನಾಮೆ ಪರಿಹಾರವಲ್ಲ ಎಂದಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸೋಲಿಗೆ ಎಲ್ಲರೂ ಹೊಣೆಗಾರರು. ಎಲ್ಲದಕ್ಕೂ ರಾಜಿನಾಮೆ ಪರಿಹಾರವಲ್ಲ ಮತ್ತು ರಾಜಿನಾಮೆಯಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಈ ಮಟ್ಟದ ಸೋಲನ್ನು ನಿರೀಕ್ಷಿಸಿರಲಿಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಮತಗಳನ್ನು ಕಳೆದುಕೊಂಡಿಲ್ಲ. ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿ ಎರಡು ಸ್ಥಾನ ಹೆಚ್ಚು ಬಂದಿವೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement