ದೇವನಹಳ್ಳಿಯಲ್ಲಿ ರೌಡಿಶೀಟರ್ಗೆ ಗುಂಡೇಟು
ಮಾರಾಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಗೋವಿಂದ...
ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಗೋವಿಂದ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿದ ಪೊಲೀಸರು ಗುಂಡು ಹಾರಿಸಿದ್ದಾರೆ.
ಕುಖ್ಯಾತ ರೌಡಿ ಕುಣಿಗಲ್ ಗಿರಿ ಸಹಚರನಾಗಿದ್ದ ಗೋವಿಂದ ಗಾಯಗೊಂಡಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂಡ ಕಟ್ಟಿಕೊಂಡು ಬೆಂಗಳೂರಿನ ಹೊರವಲಯದಲ್ಲಿ ಮಾರಾಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಗೋವಿಂದ, 60ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿದ್ದನು.
ವಶಕ್ಕೆ ಪಡೆಯುವಾಗ ಗೋವಿಂದ ದಾಳಿಗೆ ಮುಂದಾದ ಹಿನ್ನಲೆಯಲ್ಲಿ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಗೋವಿಂದನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.