ತರುಣ್ ತೇಜ್ಪಾಲ್ಗೆ ಮಧ್ಯಂತರ ಜಾಮೀನು
ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋದಡಿ ಜೈಲು ಸೇರಿದ್ದ ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ನೀಡಿದೆ.
ತರುಣ್ ತೇಜ್ಪಾಲ್ ತಾಯಿ ನಿನ್ನೆ ರಾತ್ರಿ ತೀರಿಕೊಂಡ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿ ತೇಜ್ಪಾಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು.
ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ತರುಣ್ ತೇಜ್ಪಾಲ್ ಗೆ ಸುಪ್ರೀಂಕೋರ್ಟ್ 3 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಗೋವಾದ ಪಂಚತಾರ ಹೊಟೇಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್ರನ್ನು ಗೋವಾ ಪೊಲೀಸರು ಬಂಧಿಸಿದ್ದರು.