ನಾವು 'ನುಡಿದಂತೆ ನಡೆದಿದ್ದೇವೆ': ಸಿಎಂ
ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ 'ನುಡಿದಂತೆ ನಡೆದಿದ್ದೇವೆ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ 'ನುಡಿದಂತೆ ನಡೆದಿದ್ದೇವೆ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಪುಸ್ತಕದಲ್ಲಿ ಸರ್ಕಾರದ ಸಾಧನೆಗಳನ್ನು ವಿವರಿಸಲಾಗಿದೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಸಿದ್ದು, ನಾವು ಜನರಿಗೆ ಕೊಟ್ಟಿದ ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಯ 160 ಭರವಸೆಗಳ ಪೈಕಿ ಈಗಾಗಲೇ 90 ಭರವಸೆಗಳನ್ನು ಜಾರಿಗೊಳಿಸಿದ್ದೇವೆ. ಈ ಹಿನ್ನೆಲೆಯಲ್ಲಿ 'ನುಡಿದಂತೆ ನಡೆದಿದ್ದೇವೆ' ಎಂಬ ಪುಸ್ತಕ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸ ಯೋಜನೆ ಜಾರಿಯಾಗಿಲ್ಲ. ಆದರೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಅನ್ನ ಭಾಗ್ಯದಂತಹ ಯಶಸ್ವಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಸಿಎಂ ತಿಳಿಸಿದರುಯ
1,340 ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎಸ್ಸಿ, ಎಸ್ಎಸ್ಟಿ ಸಮುದಾಯದ ಹಾಗೂ ಭಾಗ್ಯಜ್ಯೋತಿ ಬಾಕಿ ಮನ್ನಾ ಮಾಡಿದ್ದು ನಮ್ಮ ಸರ್ಕಾರ ಎಂದು ಸಿದ್ದು ಹೇಳಿದರು. ಅಲ್ಲದೆ 5 ವರ್ಷದಲ್ಲಿ ಗುಡಿಸಲು ರಹಿತ ರಾಜ್ಯ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.