ಮೇ 26ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ
ಮೇ 26ರಂದು ಭಾರತದ 14ನೇ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನವದೆಹಲಿ: ಮೇ 26ರಂದು ಭಾರತದ 14ನೇ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಎನ್‌ಡಿಎ ಸಂಸದೀಯ ಪಕ್ಷದ ನಾಯಕನಾಗಿ ಮೋದಿರನ್ನು ಆಯ್ಕೆ ಮಾಡಲಾಗಿದ್ದು, ಮೇ 26ಕ್ಕೆ ಅವರು ದೇಶದ ನೂತನ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಅವರು ಪ್ರಕಟಿಸಿದ್ದಾರೆ.
ಮೇ 26ರಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಪ್ರಧಾನಿಯಾಗಿ ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ. ಸಮಾರಂಭಕ್ಕೆ ಗಣ್ಯರು ಸೇರಿದಂತೆ ಸುಮಾರು 3 ಸಾವಿರ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಸಂಬಂಧ ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯನ್ನು ಭೇಟಿ ಮಾಡಿದ ನರೇಂದ್ರ ಮೋದಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಷ್ಟ್ರಪತಿ ಅವರು ಅನುಮೋದನೆ ನೀಡಿದ್ದಾರೆ.