ಪರಿಷತ್ ಸ್ಥಾನಕ್ಕೆ ಸದಾನಂದಗೌಡ ರಾಜಿನಾಮೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ...
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಗುರುವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಸದಾನಂದಗೌಡ ಅವರು ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ, ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಸದಾನಂದಗೌಡ ಅವರ ಸದಸ್ಯತ್ವದ ಅವಧಿ ಕೂಡ ಇದೇ ಜೂನ್ 30ಕ್ಕೆ ಮುಗಿಯುತ್ತಿದೆ. ಆದರೆ ಅಷ್ಟರೊಳಗೆ ಅವರು ಸಂಸದರಾಗಿ ಆಯ್ಕೆಯಾಗಿ, ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸದಾನಂದಗೌಡ ಅವರ ಸ್ಥಾನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಹೆಸರು ಮುಂಚೂಣಿಯಲ್ಲಿದ್ದು, ಮಾಜಿ ಸಚಿವ ವಿ.ಸೋಮಣ್ಣ ಕೂಡ ಲಾಬಿ ನಡೆಸುತ್ತಿದ್ದಾರೆ.