ಅಫ್ಘಾನಿಸ್ತಾನದ ಭಾರತೀಯ ರಾಯಭಾರ ಕಚೇರಿ ಮೇಲೆ ಉಗ್ರರ ದಾಳಿ
ಅಫ್ಘಾನಿಸ್ತಾನದ ಹೆರಾತ್ ನಗರದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ನಾಲ್ವರು ಉಗ್ರರು...
ನವದೆಹಲಿ/ಕಾಬುಲ್: ಅಫ್ಘಾನಿಸ್ತಾನದ ಹೆರಾತ್ ನಗರದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ನಾಲ್ವರು ಉಗ್ರರು ಶುಕ್ರವಾರ ಗುಂಡಿನ ದಾಳಿ ನಡೆಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯನ್ನು ಸುತ್ತುವರಿದಿರುವ ಅಫ್ಘಾನಿಸ್ತಾನ ಸೇನೆ, ಉಗ್ರರ ಮೇಲೆ ಪ್ರತಿ ದಾಳಿ ನಡೆಸುತ್ತಿದೆ. ಸುಮಾರು ನಾಲ್ಕು ಗಂಟೆಗಳಿಂದ ಉಗ್ರರ ಮತ್ತು ಸೇನೆಯ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಈಗಾಗಲೇ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಎಲ್ಲಾ ಭಾರತೀಯ ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ. ಘಟನೆ ಸಂಬಂಧ ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ.