ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಪ್‌ನ 2 ವಿಕೆಟ್ ಪತನ: ಕ್ಯಾ.ಗೋಪಿನಾಥ್, ಶಾಜಿಯಾ ಇಲ್ಮಿ ರಾಜಿನಾಮೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ..

Lingaraj Badiger
Updated On : 24 May 2014, 3:40 am

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಎರಡು ವಿಕೆಟ್ ಪತನವಾಗಿದ್ದು, ಕ್ಯಾ.ಗೋಪಿನಾಥ್ ಹಾಗೂ ಶಾಜಿಯಾ ಇಲ್ಮಿ ಅವರು ಶನಿವಾರ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಆಪ್‌ನ ಸಂಸ್ಥಾಪಕ ಸದಸ್ಯೆ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆಯಾಗಿದ್ದ ಇಲ್ಮಿ ಅವರು ಪಕ್ಷದ ಎಲ್ಲಾ ಹುದ್ದೆಗಳಿಗೂ ಇಂದು ರಾಜಿನಾಮೆ ಸಲ್ಲಿಸಿದ್ದಾರೆ.

ರಾಜಿನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಲ್ಮಿ, ಪಕ್ಷದ ಆಂತರಿಕ ಬೆಳವಣಿಗೆಗಳಿಂದ ನೊಂದು ತಾವು ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

ಇದೇ ವೇಳೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಇಲ್ಮಿ, ಕೇಜ್ರಿವಾಲ್ ಅವರು 10 ಸಾವಿರ ರುಪಾಯಿ ಬಾಂಡ್ ನೀಡಿ ಜಾಮೀನು ಪಡೆಯಬೇಕಿತ್ತು. ಈ ವಿಚಾರದಲ್ಲಿ ಕೇಜ್ರಿವಾಲ್ ನಡೆ ಸರಿಯಿಲ್ಲ ಮತ್ತು ಈ ಬಗ್ಗೆ ಅವರು ಆತ್ಮಾಲೋಕನ ಮಾಡಿಕೊಳ್ಳಬೇಕು. ಎಲ್ಲದಕ್ಕೂ ಧರಣಿ ಒಂದೇ ಪರಿಹಾರವಲ್ಲ ಎಂದಿದ್ದಾರೆ.

ಕ್ಯಾ.ಗೋಪಿನಾಥ್ ಸಹ ರಾಜಿನಾಮೆ
2014ರ ಜನವರಿಯಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದ ವೈಮಾನಿಕ ಉದ್ಯಮಿ ಕ್ಯಾ.ಗೋಪಿನಾಥ್ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ಪಕ್ಷದಲ್ಲಿನ ಭಿನ್ನಾಭಿಪ್ರಾಯ ಹಾಗೂ ಪಕ್ಷ ಸಾಗುತ್ತಿರುವ ಹಾದಿಯ ಬಗ್ಗೆ ಬೇಸರಗೊಂಡು ತಾವು ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಗೋಪಿನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement