ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಪಟ್ಟಾಭಿಷೇಕ: ಸೋನಿಯಾ, ರಾಹುಲ್ ಹಾಜರಿ ಖಚಿತ

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಾಜರಾಗುವುದು ಖಚಿತವಾಗಿದೆ.

Srinivasa Murthy VN
Updated On : 24 May 2014, 6:22 am

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಾಜರಾಗುವುದು ಖಚಿತವಾಗಿದೆ.

ಈ ಹಿಂದೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ಆಗಮಿಸುತ್ತಾರೆಯೋ ಅಥವಾ ಗೈರಾಗುತ್ತಾರೋ ಎನ್ನುವ ವಿಚಾರದ ಕುರಿತು ಹಲವು ಊಹಾಪೋಹಗಳು ಎದಿದ್ದವು. ಆದರೆ ಆ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್, ಪ್ರಮಾಣ ವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪಾಲ್ಗೊಳ್ಳಲ್ಲಿದ್ದಾರೆ ಎಂದು ಸ್ವಷ್ಟಪಡಿಸಿದೆ.

ಚುನಾವಣೆ ಮುಗಿದ ವಾರದ ಬಳಿಕವೂ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ನಿಲುವಿನ ಕುರಿತಾಗಿಯೂ ಈ ಹಿಂದೆ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಕಳೆದ ಮೇ 20ರಂದು ನರೇಂದ್ರ ಮೋದಿ ಅವರು ಬಿಜೆಪಿ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಸೋನಿಯಾ ಗಾಂಧಿ ಅವರು ಕರೆ ಮಾಡಿ ಅಭಿನಂದಿಸಿದ್ದರು.

ಇದೇ ಮೇ 26ರಂದು ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, 2500ಕ್ಕೂ ಹೆಚ್ಚು ಗಣ್ಯರಿಗೆ, ವಿವಿಧ ದೇಶಗಳ ಪ್ರಧಾನಿ ಮತ್ತು ಅಧ್ಯಕ್ಷರಿಗೆ ಮತ್ತು ಸಾರ್ಕ್ ಸಮಿತಿಯ ಸದಸ್ಯರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement